Latest

*ಚುನಾವಣೆ ಹೊತ್ತಲ್ಲೇ ಗುಂಡಿನ ದಾಳಿ; ಕಾರ್ಪೊರೇಟರ್ ಪತಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿರುವಾಗಲೇ ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ಮಹಿಳಾ ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹೈದರ್ ಅಲಿ ನದಾಫ್ ಗುಂಡಿನ ದಾಳಿಗೆ ಬಲಿಯಾದವರು. ಹೈದರ್ ವಾರ್ಡ್ ನಂಬರ್ 19ರ ಪಕ್ಷೇತರ ಪಾಲಿಕೆ ಸದಸ್ಯೆ ನತಾಶ್ ಅವರ ಪತಿ ಎಂದು ತಿಳಿದುಬಂದಿದೆ.

ಹೈದರ್ ಅಲಿ ನದಾಫ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ ಹೈದರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಲನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Home add -Advt
https://pragati.taskdun.com/kalaburgitokenteacher-arrestbjp-candidate/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button