LatestUncategorized

*ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿಗಳ ಬಸ್ ಪಲ್ಟಿ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿಗಳ ಬಸ್ ಪಲ್ಟಿಯಾಗಿ 12ಕ್ಕೂ ಹೆಚ್ಚು ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಬಳಿ ನಡೆದಿದೆ.

ಡವಲಗಿ ಗ್ರಾಮದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, 50 ಜನ ಚುನಾವಣಾ ಸಿಬ್ಬಂದಿಗಳಿದ್ದ ಕೆ ಎಸ್ ಆರ್ ಟಿಸಿ ಬಸ್ ಸಿಂದಗಿ ಪಟ್ಟಣದತ್ತ ಸಾಗಿತ್ತು. ಬಸ್ ನ ಆಕ್ಸೆಲ್ ಕಟ್ ಆಗಿ ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದೆ.

ಮೂವರು ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

https://pragati.taskdun.com/congresselection-manifestomallikarjuna-kharge/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button