Kannada NewsKarnataka NewsLatest

*ಮೂರು ಮಕ್ಕಳಿಗೆ ವಿಷಪ್ರಾಶನ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ತಂದೆ; ಇಬ್ಬರು ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ತಂದೆಯೇ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘೋರ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

ಭೀರಣ್ಣ ಮಕ್ಕಳಿಗೆ ವಿಷವುಣಿಸಿದ ತಂದೆ. ಕೌಟುಂಬಿಕ ಕಲಾದಿಂದ ಭೀರಣ್ಣನ ಪತ್ನಿ ಮನೆ ಬಿಟ್ಟು ಹೋಗಿದ್ದರು. ಈ ವೇಳೆ ಪತಿ ಭೀರಣ್ಣ ಮೂವರು ಮಕ್ಕಳಿಗೆ ವಿಷಪ್ರಾಶನ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Home add -Advt

ವಿಷಯ ತಿಳಿಯುತ್ತಿದ್ದಂತೆ ಅಕ್ಕಪಕ್ಕದವರು ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ಬರು ಮಕ್ಕಳು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಶಾಂತಾ ಹಾಗೂ ರಾಯಣ್ಣ ಮೃತರು.

ಭೀರಣ್ಣ ಹಾಗೂ ಓರ್ವ ಮಗ ಸಂಗಮೇಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button