
ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರದ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದಲ್ಲಿ ನಡೆದಿದೆ.
ಸತೀಶ್ ರಾಠೋಡ್ ಮೃತ ದುರ್ದೈವಿ. ರಮೇಶ್ ಚೌಹಾನ್ ಹಾಗೂ ಮತ್ತೋರ್ವನಿಂದ ಗುಂಡಿನ ದಾಳಿ ನಡೆಸಲಾಗಿದೆ ಎಂದು ಸತೀಶ್ ಕುಟುಂಬದವರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ನಡೆಸಿದ್ದಾರೆ.