Latest

ವಿಜಯಪುರದಲ್ಲಿ ಜನವರಿ ಮೊದಲ ವಾರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಸಿಎಂ ಸಮ್ಮತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಜಯಪುರದಲ್ಲಿ ನಡೆಯಲಿರುವ 37ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸುವುದಾಗಿ ತಿಳಿಸಿದ್ದಾರೆ.

ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ವಿಧಾನಸೌಧದಲ್ಲಿ ಭೇಟಿ ಮಾಡಿದಾಗ ಸಿಎಂ, ತಮ್ಮ ಬರುವಿಕೆಯನ್ನು ಖಚಿತಪಡಿಸಿದರು.

ಡಿಸೆಂಬರ್ ಅಂತ್ಯದವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಸಮ್ಮೇಳನ ಭಾಗವಹಿಸುವುದು ಗಡಿಬಿಡಿಯಾಗುತ್ತದೆ.
ಆದ್ದರಿಂದ 2023ರ ಜನೇವರಿ ಮೊದಲ ವಾರದಲ್ಲಿ ಸಮ್ಮೇಳನದ ದಿನಾಂಕ ನಿಗದಿ ಮಾಡಿ, ಉದ್ಘಾಟನೆಗೆ ಆಗಮಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿಗಳ ಸಲಹೆಗೆ ನಿಯೋಗವು ಸಮ್ಮತಿ ವ್ಯಕ್ತಪಡಿಸಿತು.

ಗಡಿಭಾಗ ಜಿಲ್ಲೆಯಾದ ವಿಜಯಪುರದಲ್ಲಿ ಅಚ್ಚುಕಟ್ಟಾಗಿ ಸಮ್ಮೇಳನವನ್ನು ಸಂಘಟಿಸಲು ತಿಳಿಸಿ, ಇದೇ ಸಂದರ್ಭದಲ್ಲಿ ಶುಭ ಹಾರೈಸಿದರು.

ಐಎಫ್ ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಪುಂಡಲೀಕ ಭೀ ಬಾಳೋಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ, ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಿ. ಬಿ. ವಡವಡಗಿ, ವಾಸುದೇವ ಹೊಳ್ಳ, ಮುನಿರಾಜು, ಸೋಮಶೇಖರ ಗಾಂಧಿ,
ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ವಿ. ಶಟಗಾರ, ಚನ್ನವೀರ ಸಗರನಾಳ ಮತ್ತಿತರರು ಹಾಜರಿದ್ದರು.

ಗುಜರಾತಿನ ಚುನಾವಣಾ ಫಲಿತಾಂಶ: ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://pragati.taskdun.com/gujarathelection-resultcm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button