Kannada NewsKarnataka NewsLatest

*ರೆಡ್ ಬರ್ಡ್ ಖಾಸಗಿ ಜೆಟ್ ಪತನ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಜೆಟ್ ರೆಡ್ ಬರ್ಡ್ ವಿಮಾನ ಪತನಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಬಬಲೇಶ್ವರ ತಾಲೂಕಿನ ಮಂಗಳೂರು ಎಂಬ ಗ್ರಾಮದಲ್ಲಿ ಖಾಸಗಿ ಮಿನಿ ಜೆಟ್ ಪತನಗೊಂಡಿದ್ದು, ವಿಮಾನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಬಬಲೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button