Kannada NewsKarnataka NewsLatest
*BREAKING: ಪ್ರತಿಭಟನೆ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಗೆ ಕಪಾಳಮೋಕ್ಷ ಮಾಡಿದ ಸ್ವಾಮೀಜಿ*

ಪ್ರಗತಿವಾಹಿನಿ ಸುದ್ದಿ: ಪಿಪಿಪಿ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ವಿಜಯಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿಭಟನೆಯಲ್ಲಿ ಕೆಲ ಸ್ವಾಮೀಜಿಗಳು ಕೂಡ ಪಾಲ್ಗೊಂಡಿದ್ದಾರೆ.
ಪಿಪಿಪಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಕಳೆದ ಮೂರು ದಿನಗಳಿಂದ ವಿಜಯಪುರದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇಂದು ಪ್ರತಿಭಟನಾಕಾರರು ಸಚಿವ ಎಂ.ಬಿ.ಪಾಟಿಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಂಗನಬಸವ ಸ್ವಾಮೀಜಿ ಕೂಡ ಪಾಲ್ಗೊಂಡಿದ್ದಾರೆ. ಸಚಿವರ ಮನೆಗೆ ಸ್ವಾಮೀಜಿ ಸೇರಿದಂತೆ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಮುಂದಾಗಿದ್ದ ವೇಳೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ನೂಕಾಟ-ತಳ್ಳಾಟ ನಡೆದಿದೆ. ತಳ್ಳಾಡಿದ್ದಕ್ಕೆ ಸಿಟ್ಟಿಗೆದ್ದ ಸಂಗನಬಸವ ಸ್ವಾಮೀಜಿ, ಸ್ಥಳದಲ್ಲಿದ್ದ ಕಾನ್ಸ್ ಟೇಬಲ್ ಮೇಲೆ ಕಪಾಳಮೋಕ್ಷ ಮಾಡಿದ್ದಾರೆ.
ಪೊಲೀಸ್ ಸಿಬ್ಬಂದಿ ಸೀತಾರಾಮ್ ಹಾಗೂ ಇನ್ನೋರ್ವ ಸಿಬ್ಬಂದಿಗೆ ಸ್ವಾಮೀಜಿ ಕಪಾಳಕ್ಕೆ ಹೊಡೆದಿರುವ ಘಟನೆ ನಡೆದಿದೆ.

