
ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ
ಪ್ರಗತಿವಾಹಿನಿ ಸುದ್ದಿ; ವಿಜಯಪುರ: ರಾಜಗುರು ಫುಡ್ಸ್ ಗೋದಾಮಿನಲ್ಲಿ ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ಸಂಭವಿಸಿದ ದುರಂತದಲ್ಲಿ 8 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಡಿ.4ರಂದು ರಾತ್ರಿ ಮೆಕ್ಕೆಜೋಳ ಸಂಸ್ಕರಣಾ ಗೋದಾಮಿನಲ್ಲಿ ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು 200ಟನ್ ಮೆಕ್ಕೆಜೋಳ ರಾಶಿಯೊಳಗೆ ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿದ್ದರು.
ಸತತ ಕಾರ್ಯಾಚರಣೆ ಬಳಿಕ ಪೊಲೀಸರು ಹಾಗೂ ಎಸ್ ಡಿ ಆರ್ ಎಫ್ ಸಿಬ್ಬಂದಿಗಳು ನಾಲ್ಕು ಕಾರ್ಮಿಕರನ್ನು ರಕ್ಷಿಸಿದ್ದಾರೆ. 8 ಕಾರ್ಮಿಕರು ಸಾವನ್ನಪ್ಪಿದ್ದು, 8 ಕಾರ್ಮಿಕರನ್ನು ಹೊರತೆಗೆಯಲಾಗಿದೆ.
ಮೆಕ್ಕೆಜೋಳ ಸಂಸ್ಕರಣಾ ಘಕದಲ್ಲಿ ನಡೆದ ದುರಂತದಲ್ಲಿ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 7 ಲಕ್ಷ ಪರಿಹಾರ ಘೋಷಿಸಿದೆ. ಗಾಯಾಳುಗಳ ಚಿಕಿತ್ಸೆಗೆ 50 ಸಾವಿರ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ