Karnataka News
*ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದ ತಾಯಿ: ಬಳಿಕ ಆತ್ಮಹತ್ಯೆಗೆ ಯತ್ನ: ಮಕ್ಕಳು ಸಾವು, ತಾಯಿ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ಹೆತ್ತ ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘೋರ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಬಳಿ ನಡೆದಿದೆ.
ಇಲ್ಲಿನ ಆಲಮಟ್ಟಿ ಎಡದಂಡೆ ಕಾಲುವೆಗೆ ನಾಲ್ವರು ಮಕ್ಕಳನ್ನು ಎಸೆದ ತಾಯಿ ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಸ್ಥಳೀಯರು ಗಮನಿಸಿ ಕಾಲುವೆಗೆ ಹಾರಿದ್ದ ಭಾಗ್ಯಮ್ಮಳನ್ನು ರಕ್ಷಿಸಿದ್ದಾರೆ. ಅಷ್ಟರಲ್ಲಾಗಲೇ ನೀರಿನಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದರು.
ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸೇನ್ ನಿಂಗರಾಜ ಭಜಂತ್ರಿ (2) ಹಾಗೂ 13 ತಿಂಗಳ ಕಂದಮ್ಮ ಮೃತ ಮಕ್ಕಳು. ಹೆತ್ತ ತಾಯಿಯ ದುಡುಕಿನ ನಿರ್ಧಾರಕ್ಕೆ ನಿಖರ ಕರಣ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ