ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಇಬ್ಬರು ಕಂದಮ್ಮಗಳನ್ನು ಬಾವಿಗೆ ತಳ್ಳಿದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನಲ್ಲಿ ನಡೆದಿದೆ.
ಮೂರು ವರ್ಷದ ಮಗಳು ಹಾಗೂ 1 ವರ್ಷದ ಕಂದ ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 35 ವರ್ಷ ಅವ್ವಮ್ಮಾ ಶ್ರೀಶೈಲ ಗುಬ್ಬೆವಾಡ ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಅವ್ವಮ್ಮ ಹಾಗೂ ಶ್ರೀಶೈಲ ಗುಬ್ಬೇವಾಡ ದಂಪತಿಗೆ ನಾಲ್ವರು ಹೆಣ್ಣುಮಕ್ಕಳಿದ್ದರು. ನಾಲ್ವರಲ್ಲಿ ಇಬ್ಬರು ಪುಟ್ಟಮಕ್ಕಳೊಂದಿಗೆ ಅವ್ವಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ
ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪೂಜಾಸ್ನಾನಕ್ಕೆಂದು ನದಿಗಿಳಿದ ವ್ಯಕ್ತಿ; ಕುಟುಂಬದ ಕಣ್ಮುಂದೆಯೇ ನೀರಿನ ರಭಸಕ್ಕೆ ಕೊಚ್ಚಿ ಹೋದ ಯುವಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ