Latest

ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಪೊಲೀಸ್ ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಭಾರತ್ ಜೋಡೋ ಯಾತ್ರೆ ವೇಳೆ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸವಾಲು ಹಾಕಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಸಿದ್ದರಾಮಯ್ಯ ಪೊಲೀಸರ ವಿರುದ್ಧ ಅಸಮಾಧಾನದ ಮಾತನಾಡಿದ್ದರು. ಅಲ್ಲದೇ ಪೊಲೀಸರು ಅವರ ಜೊತೆ ಶಾಮೀಲಾಗಿದ್ದಾರೆ ಎನ್ನುವ ಮಾತು ಹೇಳಿದ್ದರು. ಈ ಮಾತಿಗೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಪೇದೆ ರಾಜಶೇಖರ ಪೊಲಿಸರನ್ನು ಬೈಯ್ಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು ಎಂದು ಫೇಸ್ ಬುಕ್ ನಲ್ಲಿ ಚಾಲೇಂಜ್ ಮಾಡಿದ್ದರು. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸ್ ಪೇದೆ ರಾಜಶೇಖರ್ ವಿರುದ್ಧ ಕುರುಬರ ಸಂಘ ದೂರು ನೀಡಿತ್ತು.

ಇದೀಗ ವಿಜಯಪುರ ಎಸ್ ಪಿ ಆನಂದ್ ಕುಮಾರ್ ರಾಜಶೇಖರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ರಾಜ್ಯದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ

https://pragati.taskdun.com/latest/karnataka-heavy-rain3-daysimd-2/

Related Articles

Back to top button