Kannada NewsKarnataka NewsLatest

*ಗಣರಾಜ್ಯೋತ್ಸವ ಧ್ವಜಾರೋಹಣದ ವೇಳೆ ಗುಂಡಿನ ದಾಳಿ; ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದರೆ ವಿಜಯಪುರದ ಗ್ರಾಮವೊಂದರಲ್ಲಿ ಧ್ವಜಾರೋಹಣದ ವೇಳೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರು ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಧ್ವಜಾರೋಹಣ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗುಂಡೇಟು ಗ್ರಾಮ ಪಂಚಾಯ್ತಿ ಅಧ್ಯಕ್ಷೆಗೆ ತಗುಲಿದೆ.

Home add -Advt

ಗ್ರಾಮ ಪಂಚಾಯಿತಿಯಲ್ಲಿ ಧ್ವಜಾರೋಹಣ ಮಾಡುತ್ತಿದ್ದ ವೇಳೆ ಕನ್ನಡ ಪರ ಸಂಘಟನೆಯ ಮುಖಂಡ ಮಲ್ಲು ಗಿನ್ನಿ ಎಂಬಾತ ಕಚೇರಿ ಮುಂದೆ ಗಾಳಿಯಲ್ಲಿ ಗುಂಡು ಹೊಡೆದಿದ್ದಾನೆ. ಗುಂಡೇಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತೊಡೆ ಭಾಗಕ್ಕೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೋಮವ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲಿಸರು ಘಟನಾ ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲಿಸರು ತನಿಖೆ ನಡೆಸಿದ್ದಾರೆ.

Related Articles

Back to top button