Latest

ರೌಡಿಶೀಟರ್ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಹಳೆ ವೈಷಮ್ಯದ ಹಿನ್ನಲೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ರೌಡಿಶೀಟರ್‌ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ್ ಬಳಿ ಈ ಘಟನೆ ನಡೆದಿದೆ. ವಿಜಯಪುರ ನಿವಾಸಿ ಸತೀಶ್ ರೆಡ್ಡಿ (28) ಕೊಲೆಯಾದ ರೌಡಿಶೀಟರ್.

ತಡರಾತ್ರಿ ದುಷ್ಕರ್ಮಿಗಳು ಸತೀಶ್ ರೆಡ್ಡಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಹಳೆಯ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button