ಪ್ರಗತಿವಾಹಿನಿ ಸುದ್ದಿ; ವಿಜಯವಾಡ: ಕೋವಿಡ್ ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 9 ಜನರು ಸಾವನ್ನಪ್ಪಿರುವ ಘಟನೆ ಆಂದ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್ನ್ನು ತಾತ್ಕಾಲಿಕ ಕೊವಿಡ್ ಕೇರ್ ಸೆಂಟರ್ ಆಗಿ ಮಾಡಲಾಗಿದ್ದು, ಇಂದು ಬೆಳಗಿನ ಜಾವ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 3 ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. 30 ಕೊರೊನಾ ಸೋಂಕಿತರು ಈ ಕೇರ್ ಸೆಂಟರ್ ನಲ್ಲಿ ದಾಖಲಾಗಿದ್ದರು.
ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು 20 ಮಂದಿಯನ್ನು ಘಟನಾ ಸ್ಥಳದಿಂದ ಪಾರು ಮಾಡಲಾಗಿದೆ. ಇನ್ನೂ ಹಲವರು ಈ ಹೋಟೆಲ್ ಕಟ್ಟಡದಲ್ಲಿ ಸಿಲುಕಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಲು ಕಾರಣ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ