
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಗೆ ಪಾದಯಾತ್ರೆ ಇಲ್ಲ, ಬೃಹತ್ ಹೋರಾಟ ಮಾತ್ರ’ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಘೋಷಣೆ ಮಾಡಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಜ.17ರಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕಾನೂನು ಸುವ್ಯವಸ್ಥೆ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತೇವೆ. ಪಾದಯಾತ್ರೆ ನಿರ್ಧಾರವನ್ನು ಹೈಕಮಾಂಡ್ ಗೆ ಬಿಟ್ಟಿದ್ದೇವೆ. ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಮಾತ್ರ ಪಾದಯಾತ್ರೆ ನಡೆಸುತ್ತೇವೆ ಎಂದು ವಿಜಯೇಂದ್ರ ಹೇಳಿದರು.



