Politics

*ಯತ್ನಾಳ್ ಆಕ್ರೋಶದ ಬೆನ್ನಲ್ಲೇ ಬಿಜೆಪಿ ತಂಡ ಪುನಾರಚಿಸಿದ ವಿಜಯೇಂದ್ರ*

ವಿಜಯೇಂದ್ರ ತಂಡಕ್ಕೆ ಬಹಿಷ್ಕಾರ ಎಂದಿದ್ದ ಯತ್ನಾಳ್

ಪ್ರಗತಿವಾಹಿನಿ ಸುದ್ದಿ: ವಕ್ಫ್ ವಿರುದ್ಧ ಮೊದಲು ಹೋರಾಟ ಪ್ರಾರಂಭಿಸಿದ್ದೇ ನಾನು. ವಿಜಯೇಂದ್ರ ನನ್ನನ್ನು ತುಳಿಯಲು ಸಾಧ್ಯವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಅಹವಾಲು ಸ್ವೀಕರಿಸಲು ಬಿಜೆಪಿಯಿಂದ ಗೋವಿಂದ ಕಾರಜೋಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಹಾಲಿ ಸಂಸದ, ಶಾಸಕ ನಾನು ಇದ್ದೇನೆ. ನಮ್ಮನ್ನ ಹೊರಗಿಟ್ಟು ತಂಡ ರಚಿಸಿದ್ದಾರೆ. ಇದು ವಿಜಯೇಂದ್ರನ ತಂಡಕ್ಕೆ ನಾನು ಬಹಿಷ್ಕಾರ ಹಾಕಿದ್ದೇನೆ ಎಂದು ಕಿಡಿಕಾರಿದರು.

ತಂಡದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ಹರೀಶ್ ಪೂಂಜಾ, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಎಂಎಲ್‌ಸಿ ಅರುಣ್ ಶಹಾಪುರ ಹಾಗೂ ಮುಖಂಡ ಕಲ್ಮರುಡಪ್ಪ ಸೇರಿದಂತೆ ಹಲವು ಶಾಸಕರನ್ನು ತಂಡ ಒಳಗೊಂಡಿದೆ. ಆದರೆ ವಿಜಯಪುರ ನಗರ ಶಾಸಕನಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಂಸದ ರಮೇಶ್ ಜಿಗಜಿಣಗಿಗೆ ತಂಡದಲ್ಲಿ ಸ್ಥಾನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಶಾಸಕ ಯತ್ನಾಳ್ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಎಚ್ಚೆತ್ತ ಬಿ.ವೈ.ವಿಜಯೇಂದ್ರ ರೈತರ ಅಹವಾಲು ಸ್ವೀಕರಿಸುವ ಬಿಜೆಪಿ ತಂಡ ಪುನಾರಚನೆ ಮಾಡಿದ್ದು, ಯತ್ನಾಳ್ ಹೆಸರನ್ನೂ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button