ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಪಂಚ ರಾಜ್ಯ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಮೊದಲು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವ ವಿದ್ಯಮಾನ ನಡೆದಿದೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಬಿಜೆಪಿ ರಾಷ್ಟ್ರ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾರೆ.
ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಪಂಚ ರಾಜ್ಯ ಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ಸಚಿವಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಸುದ್ದಿಯ ಬೆನ್ನಲ್ಲೇ ವಿಜಯೇಂದ್ರ- ನಡ್ಡಾ ಭೇಟಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಸಂಪುಟಕ್ಕೆ ವಿಜಯೇಂದ್ರ ಸೇರ್ಪಡೆ ಕುರಿತಂತೆ ಮಾತುಕತೆ ನಡೆದಿರುವ ಸಾಧ್ಯತೆ ಜೊತೆಗೆ ತಮ್ಮ ಬೆಂಬಲಿಗರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಕುರಿತು ಸಹ ಚರ್ಚಿಸಿರಬಹುದಾದ ಸಾಧ್ಯತೆಗಳಿವೆ. ಜೊತೆಗೆ ರಾಜ್ಯದಲ್ಲಿ ಪಕ್ಷವನ್ನು ಮತ್ತು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮುಂದಿನ ಚುನಾವಣೆ ಜವಾಬ್ದಾರಿಯನ್ನು ಯಡಿಯೂರಪ್ಪ ಹೆಗಲಿಗೆ ವಹಿಸುವಂತೆ ಬೇಡಿಕೆ ಇಟ್ಟಿರಬಹುದಾದ ಸಾಧ್ಯತೆಗಳೂ ಇವೆ.
ಒಟ್ಟಾರೆ, ಪಂಚ ರಾಜ್ಯ ಚುನಾವಣೆ ಫಲಿತಾಂಶದ ನಂತ ಕರ್ನಾಟಕ ರಾಜಕಾರಣದಲ್ಲಿ ಅದರಲ್ಲೂ ಬಿಜೆಪಿಯಲ್ಲಿ ಹಲವು ಬದಲಾವಣೆಗಳಾಗಲಿವೆ ಎನ್ನುವ ಸುದ್ದಿ ದಟ್ಟವಾಗಿದೆ.
ಗೋವಾ ಮತದಾರರು ಬದಲಾವಣೆ ಬಯಸಿದ್ದಾರೆ: ಡಿ.ಕೆ. ಶಿವಕುಮಾರ್ ಹೇಳಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ