
ಪ್ರಗತಿವಾಹಿನಿ ಸುದ್ದಿ: ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ವಿಪಕ್ಷ ಬಿಜೆಪಿ ನಾಯಕರು ಸಿಎಂ ಸಿದರಾಮಯ್ಯ ನಿವಾಸ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದನ್ನು ಖಂಡಿಸಿ ಬಿಜೆಪಿ ರಾಜ್ಯದಹ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಸಿಎಂ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಾ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಬಿಜೆಪಿ ನಾಯಕರು ಸಿಎಂ ನಿವಾಸ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಪೊಲೀಸರು ಹಾಗೂ ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆದಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.




