
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಶೀಘ್ರ ರಾಜೀನಾಮೆ ಕೊಡುತ್ತಾರೆ. ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲು ಭೂಮಿಕೆ ಸಜ್ಜಾಗಿದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯನವರನ್ನು ಎಐಸಿಸಿ, ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ರಾಷ್ಟ್ರೀಯ ಮಟ್ಟದ ಹುದ್ದೆಯನ್ನು ನೀಡುವ ಮೂಲಕ ಕುರ್ಚಿ ಬದಲಾವಣೆ ಬಗ್ಗೆ ಪರೋಕ್ಷ ಸೂಚನೆ ನೀಡಲಾಗಿದೆ. ಸಿಎಂ ಸ್ಥಾನ ತ್ಯಜಿಸಿ ದೆಹಲಿಗೆ ಬನ್ನಿ ಎಂದು ಕಾಂಗ್ರೆಸ್ ಹೈಕಮಾಂಡ್ ಈ ಮೂಲಕ ಸಂದೇಶ ನೀಡಿದೆ ಎಂದಿದ್ದಾರೆ.