Karnataka NewsLatestPolitics

*ದಾವಣಗೆರೆಯಲ್ಲಿ ಸಚಿವರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ: ವಿಜಯೇಂದ್ರ ಆರೋಪ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ದಾವಣಗೆರೆಯಲ್ಲಿ ಸಚಿವರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ ಎಂದು ಆರೋಪಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯೇಂದ್ರ ದಾವಣಗೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಹಣ ತರುವುದಿಲ್ಲ, ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ. ಅಲ್ಲಿನ ರಾಜಕೀಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ನನಗೆ ತಿಳಿದಿದೆ ಎಂದು ವಾಗ್ದಾಳಿ ನಡೆಸಿದರು.

Home add -Advt

ರಾಜ್ಯದ ಜನ ಕಾಂಗ್ರೆಸ್ ಸರ್ಕಾರದಿಂದ ಬೇಸತ್ತಿದ್ದಾರೆ. ಇದು ಬಡವರು ಮತ್ತು ದೀನದಲಿತರ ವಿರೋಧಿ ಸರ್ಕಾರ ಎಂದರು. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಕಮಲದ ಹೂವು ಅರಳುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Related Articles

Back to top button