Karnataka NewsLatestPolitics

*ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕೆಲ ಶಾಸಕರಿಂದ ಅಡ್ಡಮತದಾನ ಹಿನ್ನೆಲೆಯಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ದೆಹಲಿಯಿಂದ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ವಿಜಯೇಂದ್ರ ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇತ್ತೀಚೆಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಅಡ್ಡ ಮತದಾನದ ವಿಚಾರದಲ್ಲಿ ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಸ್ತಾಪ ಮಾಡಿದ್ದ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

Home add -Advt

ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿರುವ ವಿಜಯೇಂದ್ರ ಅವರಿಗೆ ಸಂಸದ ಬ್ರಿಜೇಶ್ ಚೌಟ ಸಾಥ್ ನೀಡಿದ್ದು, ಸ್ಥಳೀಯ ಶಾಸಕರಾದ ಹರೀಶ್ ಪೂಂಜಾ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹಾಗೂ ಯಶ್‌ಪಾಲ್ ಸುವರ್ಣ ಸೇರಿದಂತೆ ಹಲವು ಗಣ್ಯರು ಅವರೊಂದಿಗೆ ಉಪಸ್ಥಿತರಿದ್ದರು.

Related Articles

Back to top button