Kannada NewsKarnataka NewsLatest

*ನಾಗೇಂದ್ರ ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡಿದ್ರಾ? ವಿಜಯೇಂದ್ರ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಲುಕಿರುವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿದ್ದು ಸರಿಯಲ್ಲ, ಅವರು ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಸದನದ ಒಳಗೂ , ಹೊರಗು ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ನಾಗೇಂದ್ರ ವಿರುದ್ಧ ಒಂದೆರಡಲ್ಲ, ನೂರಾರು ಕೋಟಿ ಲೂಟಿ ಮಾಡಿರುವ ಆರೋಪವಿದೆ. ಕೋರ್ಟ್ ತೀರ್ಪು ನೀಡುವ ಮುನ್ನವೇ ಕಾಂಗ್ರೆಸ್ ನಾಯಕರೇ ನಿರ್ಧಾರ ಕೈಗೊಂಡು ಸಚಿವ ಸ್ಥಾನ ನೀಡಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಚಹಾರ ಆರೋಪ ಹೊತ್ತಿರುವ ನಾಗೇಂದ್ರ ಕಾಂಗ್ರೆಸ್ ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರಾ? ಸತ್ಯ ಬಹಿರಂಗ ಪಡಿಸುತ್ತೇನೆ ಎಂದು ಹೆದರಿಸಿದ್ರಾ? ಹಾಗಾಗಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಾರಾ? ಆರೋಪಿ ಸ್ಥಾನದಲ್ಲಿರುವ ನಾಗೇಂದ್ರಗೆ ಸಚಿವ ಸ್ಥಾನ ಕೊಟ್ಟಿರುವುದು ಸರಿಯಲ ಎಂದು ಗುಡುಗಿದರು.

ಈ ವಿಚಾರವನ್ನು ನಾವು ಸದನದ ಒಳಗೂ ಪ್ರಸ್ತಾಪಿಸುತ್ತೇವೆ. ತಕ್ಷಣ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಕಾಂಗ್ರೆಸ್ ನಾಯಕರು ಭ್ರಷ್ಟರ ರಕ್ಷಣೆಗೆ ಮುಂದಾಗಬಾರದು ಎಂದು ಹೇಳಿದರು.

Related Articles

Back to top button