Belagavi NewsBelgaum NewsKarnataka NewsLatestPolitics

*ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ; 2 ವರ್ಷ ಏನೂ ಮಾಡದವರು ಇನ್ನೆರಡು ವಾರಗಳಲ್ಲಿ ಏನು ಮಾಡ್ತಾರೆ? ವಿಜಯೇಂದ್ರ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಯಾಗದಿರುವ ವಿಚಾರವಾಗಿ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿದ್ದರಾಮಯ್ಯ ಔಟ್ ಗೋಯಿಂಗ್ ಮುಖ್ಯಮಂತ್ರಿ. ಇದು ಸಿದ್ದರಾಮಯ್ಯನವರಿಗೆ ಕೊನೆ ಅಧಿವೇಶನ ಎಂದು ವ್ಯಂಗ್ಯವಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಇಷ್ಟು ವರ್ಷ ಎನೂ ಮಾಡಲಾಗದವರು ಇನ್ನೆರಡು ವರದಲ್ಲಿ ಏನು ಮಾಡಲು ಸಾಧ್ಯ? ಪಾಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳ ಮಾತಿನ ದಾಟಿ ನೋಡಿದರೆ ನಿಮಗೆ ಅರ್ಥವಾಗುತ್ತದೆ. ಸದನದಲ್ಲಿ ಚರ್ಚಿಸುವುದಕ್ಕೆ ಔಟ್ ಗೋಯಿಂಗ್ ಮುಖ್ಯಮಂತ್ರಿಗಳಿಂದ ಪರಿಹಾರ ಸಿಗುತ್ತದೆ ಎನ್ನುವ ಆಶಾಭಾವನೆ ಇಲ್ಲ ಎಂದು ಹೇಳಿದರು.

ನೀವು ಸಿಎಂ ಆಗಿ ಎಷ್ಟು ದಿನ ಇರ್ತೀರಾ ಎಂಬುದು ಮುಖ್ಯವಲ್ಲ. ಆ ಸ್ಥಾನದಲ್ಲಿದ್ದು ರಾಜ್ಯಕ್ಕೆ ಏನು ಕೆಲಸ ಮಾಡಿದ್ದೀರಿ? ಎಂಬುದು ಮುಖ್ಯ. ಸಿದ್ದರಾಮಯ್ಯನವರ ಕೊನೆಯ ಅಧಿವೇಶನದಲ್ಲಾದರೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ ಎಂದು ಹೇಳಿದರು.

ಕಳೆದ ಎರಡೂವರೆ ವರ್ಷಗಳಿಂದ ಏನೂ ಮಾಡದೇ ಇರೋರು ಇನ್ನೆರಡು ವಾರದಲ್ಲಿ ಏನು ಮಾಡ್ತಾರೆ? ಎಂದು ಆಕ್ರೋಶ ವ್ಯಕ್ತಪಡಿಸಿದಾರೆ.

Home add -Advt


Related Articles

Back to top button