LatestNational

*BREAKING: ಖ್ಯಾತ ನಟ ವಿಜಯ್ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ: 30ಕ್ಕೂ ಹೆಚ್ಚು ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟಾಲಿವುಡ್ ನಟ, ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ನಡೆಸುತ್ತಿದ್ದ ರ್ಯಾಲಿಯಲ್ಲಿ ಭೀಕರ ಕಾಲ್ತಿಳಿತ ಸಂಭವಿಸಿದ್ದು, ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ರ್ಯಾಲಿ ಆಯೋಜಿಸಲಾಗಿತ್ತು. ಈ ವೇಳೆ ನೆಚ್ಚಿನ ನಟನನ್ನು ನೋಡಲು ಜನರು ಮುಗಿಬಿದ್ದಿದ್ದಾರೆ. ನುಕುನುಗ್ಗಲುವುಂಟಾಗಿ ಕಾಲ್ತುಳಿತ ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button