Kannada NewsLatestNationalPolitics

*ತಮಿಳುನಾಡು ಸಿಎಂ ಆಗಿ ಕೆಲವೇ ಕ್ಷಣಗಳಲ್ಲಿ ವಿಜಯ್ ಪದಗ್ರಹಣ: ಸಮಾರಂಭದಲ್ಲಿ ಭಾರಿ ಗಮನ ಸೆಳೆದ ನಟಿ ತ್ರಿಷಾ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿರುವ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ ಪಕ್ಷಕ್ಕೆ ಸರ್ಕಾರ ರಚನೆಗೆ ರಾಜ್ಯಪಾಲರು ಕೊನೆಗೂ ಅನುಮತಿ ನೀಡಿದ್ದು, ಇಂದು ಚೆನ್ನೈನಲ್ಲಿ ವಿಜಯ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Home add -Advt

ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಜಯ್ ಅವರ ತಂದೆ-ತಾಯಿ ಕುಟುಂಬದವರು ಭಾಗಿಯಾಗಿದ್ದಾರೆ.

ವಿಜಯ್ ಪದಗ್ರಹಣ ಸಮಾರಂಭದಲ್ಲಿ ನಟಿ ತ್ರಿಷಾ ಕೃಷ್ಣನ್ ಭಾರಿ ಗಮನ ಸೆಳೆಯುತ್ತಿದ್ದಾರೆ. ಸಾಂಪ್ರದಾಯಿಕ ಸೀರೆಯಲ್ಲಿ, ಮುಡಿಯಲ್ಲಿ ಮಲ್ಲಿಗೆ ಮುಡಿದು ಸಮಾರಂಭದ ತುಂಬೆಲ್ಲ ಸಂಭ್ರಮದಿಂದ ಓಡಾಡುತ್ತಿದ್ದಾರೆ.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ಪಕ್ಷಗಳ ಬೆಂಬಲದೊಂದಿಗೆ 120 ಶಾಸಕರ ಬಲ ಹೊಂದಿರುವ ವಿಜಯ್ ಸರ್ಕಾರ ರಚನೆ ಮಾಡುತ್ತಿದ್ದು, , 1967ರ ನಂತರ ಡಿಎಂಕೆ ಮತ್ತು ಎಐಎಡಿಎಂಕೆ ಹೊರತಾಗಿ ಅಧಿಕಾರ ಹಿಡಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Related Articles

Back to top button