CrimeKannada NewsKarnataka NewsPolitics
		
	
	
*ದರ್ಪ ಮೆರೆದ ವಿಜುಗೌಡ ಪಾಟೀಲ ಪುತ್ರ: ಟೋಲ್ ಸಿಬ್ಬಂದಿ ಮೇಲೆ ಸಮರ್ಥ್ ಗೌಡನ ಗ್ಯಾಂಗ್‌ನಿಂದ ಹಲ್ಲೆ!*

https://www.facebook.com/share/v/1EfKsvyKRu
ಪ್ರಗತಿವಾಹಿನಿ ಸುದ್ದಿ: ವಿಜಯಪುರದ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ವಿಡಿಯೋ ವೈರಲ್ ಆಗಿದೆ.
ವಿಜಯಪುರ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಭಾರಿ ವೈರಲ್ ಆಗಿದೆ.
ಪುತ್ರ ಸಮರ್ಥ ಗೌಡ ವಿಜಯಪುರದಿಂದ ಬ್ಲ್ಯಾಕ್ ಕಲರ್ ಥಾರ್‌ನಲ್ಲಿ ಸಿಂದಗಿ ಕಡೆ ಹೊರಟ್ಟಿದ್ದರು. ಈ ವೇಳೆ ಟೋಲ್ ಸಿಬ್ಬಂದಿ ಸಂಗಪ್ಪ ಟೋಲ್ ಹಣ ಕೇಳಿದ್ದಕ್ಕೆ ವಿಜು ಗೌಡ ಪುತ್ರ ಎಂದಿದ್ದಾರೆ. ಅದಕ್ಕೆ ಯಾವ ವಿಜುಗೌಡ ಅಂತಾ ಸಂಗಪ್ಪ ಕೇಳಿದ್ದಕ್ಕೆ ಸಮರ್ಥ ಗೌಡ ಹಾಗೂ ಸ್ನೇಹಿತರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ ಹಲ್ಲೆಗೊಳಗಾದ ಸಂಗಪ್ಪಗೆ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಮರ್ಥ ಗೌಡ ವಿರುದ್ಧ ಟೋಲ್ ಸಿಬ್ಬಂದಿ ದೂರು ದಾಖಲಿಸಲು ಮುಂದಾಗಿದ್ದಾರೆ
.
 
					 
				 
					 
					 
					 
					
 
					 
					 
					


