
ಪ್ರಗತಿವಾಹಿನಿ ಸುದ್ದಿ; ಹಾಸನ: ಮರಗಳನ್ನು ಕಡಿದು ಮಾರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು ಮಂಜೂರು ಮಾಡಲಾಗಿದೆ.
ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಬಳಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿದು ಮಾರಿದ ಪ್ರಕರಣ ಸಂಬಂಧ ನಿನ್ನೆ ಅರಣ್ಯ ಇಲಾಖೆ ಅಧಿಕಾರಿಗಳು ವಿಕ್ರಂ ಸಿಂಹನನ್ನು ಬಂಧಿಸಿದ್ದರು.
ಇಂದು ಅರಣ್ಯಾಧಿಕಾರಿಗಳು ವಿಕ್ರಂ ಸಿಂಹನನ್ನು ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ವಿಕ್ರಂ ಸಿಂಹಗೆ ಜಾಮೀನು ಮಂಜೂರು ಮಾಡಿದ್ದು, ವಿಕ್ರಂ ಸಿಂಹ ಬಿಡುಗಡೆಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ