ಪ್ರಗತಿವಾಹಿನಿ ಸುದ್ದಿ: ಆಸ್ತಿ ವಿಚಾರಕ್ಕೆ ಪಂಚಾಯತಿ ಸದಸ್ಯನೊಬ್ಬ ಅಕ್ಕನ ಮಗಳ ಮೇಲೆ ಹಲ್ಲೆ ಮಾಡಿರುವ ಘಟನೆ, ಧಾರವಾಡದ ಕನಕೂರಿನಲ್ಲಿ ನಡೆದಿದ್ದು, ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದೆ. ಸದ್ಯ ಈ ವಿಡಿಯೋ ಎಲ್ಲಡೆ ವೈರಲ್ ಆಗಿದೆ.
ಧಾರವಾಡ ತಾಲೂಕಿನ ಕನಕೂರು ಗ್ರಾಮ ಪಂಚಾಯತಿ ಸದಸ್ಯ ಮಾರುತಿ ಪವಾರ ಹಲ್ಲೆ ಮಾಡಿದ ಗ್ರಾಮ ಪಂಚಾಯತಿ ಸದಸ್ಯನಾಗಿದ್ದಾನೆ. ಪಂಚಾಯತಿ ಸದಸ್ಯನ ಸಂಬಂಧಿ ರಾಮಚಂದ್ರ ಕೂಡ ಯುವತಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಇನ್ನು ಪಂಚಾಯತಿ ಸದಸ್ಯ ಹಾಗೂ ಸಂಬಂಧಿ ತಮ್ಮ ಅಕ್ಕನ ಮಗಳ ಜೊತೆಗೆ ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುವುದನ್ನು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಆಸ್ತಿ ವಿಚಾರವಾಗಿ ಪ್ರಶ್ನೆ ಮಾಡಿದ್ದಕ್ಕೆ ಈ ಘಟನೆ ನಡೆದಿದೆಯಂತೆ. ಸಾರ್ವಜನಿಕ ಪ್ರದೇಶದಲ್ಲಿ ಮಹಿಳೆಯ ಜೊತೆಗೆ ಹೀಗೆ ನಡೆದುಕೊಳ್ಳವುದು ಎಷ್ಟರಮಟ್ಟಿಗೆ ಸರಿ ಎನ್ನುವುದು ಪ್ರಜ್ಞಾವಂತ ನಾಗರಿಕರ ಪ್ರಶ್ನೆಯಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ