ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಮೂವರು ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸಮಿತಿಯ ತನಿಖಾ ವರದಿ ಕೈಸೇರಿದ ಕೂಡಲೇ ಕರ್ತವ್ಯ ಲೋಪ ಎಸಗಿ ಅಮಾಯಕ ರೋಗಿಗಳ ದುರಂತ ಸಾವಿಗೆ ಕಾರಣರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ವಿಮ್ಸ್ ಆಸ್ಪತ್ರೆಯಲ್ಲಿ 3 ರೋಗಿಗಳ ದಾರುಣ ಸಾವು ಪ್ರಕರಣ; ನಿರ್ದೇಶಕ ಡಾ.ಗಂಗಾಧರ್ ಹೇಳಿದ್ದೇನು?
https://pragati.taskdun.com/latest/https-pragativahini-com-world-world-cities-millionaires-places-henlyandpartners-group-report/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ