Kannada NewsLatestNationalPolitics

*BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಯೋಗೀಶ್ ಗೌಡ ಹತ್ಯೆ ಕೇಸ್ ನಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪದಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಜೈಲು ಸೇರಿದ್ದ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಲು ನಿರಾಕರಿಸಿತ್ತು. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಶಿಕ್ಷೆ ಅನುಭವಿಸುತ್ತಿರುವುದರಿಂದ ಸುಪ್ರೀಂ ಕೋರ್ಟ್ ನಲ್ಲಿಯೇ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇಂದು ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದೆ. ಅಲ್ಲದೇ 2 ತಿಂಗಳ ಒಳಗಾಗಿ ವಿಚಾರಣೆಯನ್ನು ಮುಗಿಸುವಂತೆ ಸೂಚನೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button