Karnataka NewsLatestPolitics

*ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ಬಳಿಕ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಜೈಲಿಗೆ ತೆರಳಲಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಗೆ ಶರಣಾಗುವಂತೆ ಸೂಚಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಇಂದು ಕೋರ್ಟ್ ಮುಂದೆ ಶರಣಾಗಿದ್ದು, ಈ ವೇಳೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button