Politics

*ಅತ್ಯಾಚಾರ ಆರೋಪ: ಮಹಿಳೆ ವಿರುದ್ಧ ಪ್ರತಿ ದೂರು ದಾಖಲಿಸಿದ ವಿನಯ್ ಕುಲಕರ್ಣಿ; FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಶಾಸಕ ವಿನಯ್ ಕುಲಕರ್ಣಿ, ದೂರು ನೀಡಿರುವ ಮಹಿಳೆ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

Home add -Advt

ಬೆದರಿಕೆ ಹಾಕಿದ ಆರೋಪದಡಿ ಹಾಗೂ ಷಡ್ಯಂತ್ರ, ಮಾನಹಾನಿ ಮಾಡಿರುವ ಆರೋಪದಡಿ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಹಿಳೆ ಹಲವು ಅಧಿಕಾರಿಗಳು, ರಾಜಕೀಯ ನಾಯಕರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾಳೆ. ನನ್ನ ವಿರುದ್ಧವೂ ಸಂಚು ರೂಪಿಸಿ ತೇಜೋವಧೆ ಮಾಡುತ್ತಿದ್ದು, ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ವಿನಯ್ ಕುಲಕರ್ಣಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆ ವಿರುದ್ಧ ಎಫ್ಐಆರ್ ದಾಖಲಾಗಿದೆ.

Related Articles

Back to top button