Karnataka NewsLatestPolitics

*ವಿನಯ್ ಕುಲಕರ್ಣಿಗೆ ಜಾಮೀನು; ಶಾಸಕ ಸ್ಥಾನಕ್ಕೆ ಮತ್ತೆ ಜೀವ*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿ ಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದುರಿಸಿತ್ತು. ಇದೀಗ ತೀರ್ಪು ಪ್ರಕಟಿಸಿರುವ ಹೈಕೋರ್ಟ್ ಶಿಕ್ಷೆ ಅಮಾನತ್ತಿನಲ್ಲಿಟ್ಟು ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದೆ.

 5 ಲಕ್ಷ ರೂ. ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ಕೋರ್ಟ್​ ಆದೇಶಿಸಿದೆ. ಇದೇ ವೇಳೆ ವಿನಯ್ ಕುಲಕರ್ಣಿ ದೋಷಿ ಎಂದು ಪ್ರಕಟಿಸಿದ್ದ ತೀರ್ಪಿಗೂ ತಡೆಯಾಜ್ಞೆ ನೀಡಲಾಗಿದೆ. ಈ ಆದೇಶದಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಮೂಡಿದೆ.

ಈ ಮೂಲಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಶಾಸಕ ಸ್ಥಾನಕ್ಕೂ ಮತ್ತೆ ಜೀವ ಬಂದಂತಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button