Kannada NewsKarnataka NewsLatestPolitics

*BREAKING: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಲಾಗಿದೆ.

ಯೋಗೇಶ್ ಗೌಡ ಕೊಲೆ ಕೇಸ್ ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ನೀಡಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಳಿಸಲಾಗಿದೆ.

ಈ ಬಗ್ಗೆ ಸರ್ಕಾರದ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಏಪ್ರಿಲ್ 15ರಿಂದ ಅನ್ವಯವಾಗುವಂತೆ ವಿನಯ್ ಕುಅಲರ್ಣಿ ಅವರ ಶಾಸಕ ಸ್ಥಾನ ಅನರ್ಹವಾಗಿದೆ ಎಂದು ತಿಳಿಸಲಾಗಿದೆ.

Related Articles

Back to top button