
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಪುತ್ರನ ಬೈಕ್ ಅಪಘಾತಕ್ಕೀಡಾಗಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿ ನಡೆದಿದೆ.
ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಪುತ್ರ ಹೇಮಂತ್ ಬೈಕ್ ಅಪಘಾತವಾಗಿದ್ದು, ಹೇಮಂತ್ ಗೆ ಗಾಯಗಳಾಗಿವೆ.
ಬೈಕ್ ನಿಯಂತ್ರಣತಪ್ಪಿ ಉರುಳಿ ಬಿದ್ದಿದ್ದು, ಪರಿಣಾಮ ಹೇಮಂತ್ ಕಾಲಿಗೆ ಪೆಟ್ಟಾಗಿದೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ