Kannada NewsKarnataka NewsLatestPolitics

*BREAKING: ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬಿಗ್ ಶಾಕ್ ನೀಡಿದೆ. ವಿನಯ್ ಕುಲಕರ್ಣಿ ಸೇರಿ ಇತರರು ದೋಷಿಗಳು ಎಂದು ನ್ಯಾಯಾಲಯ ತೀರ್ಪು ನೀಡಿದೆ.

Home add -Advt

ಯೋಗೇಶ್ ಗೌಡ ಕೊಲೆ ಕೇಸ್ ನಲ್ಲಿ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ನೀಡಿರುವ ನ್ಯಾಯಾಲಯ, ಶಿಕ್ಷೆ ಪ್ರಮಾಣದ ಬಗ್ಗೆ ನಾಳೆ ವಾದಮಂಡನೆಯಾಗಲಿದೆ ಎಂದು ತಿಳಿಸಿದೆ.

ಇದೇ ವೇಳೆ ಪ್ರಕರಣದಲ್ಲಿ ಪ್ರಕರಣದ ಎ 20 ಹಾಗೂ ಎ 21 ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಶಾಸಕ ವಿನಯ್ ಕುಲಕರ್ಣಿ ಸೇರಿ ಇತರ ಅಪರಾಧಿಗಳನ್ನು ತಕ್ಷಣ ವಶಕ್ಕೆ ಪಡೆಯುವಂತೆ ನ್ಯಾಯಾಲಯ ಸೂಚಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಶಿಕ್ಷೆ ಖಚಿತವಾಗಿದ್ದು, ಎಷ್ಟು ವರ್ಷ ಜೈಲುವಾಸ ಎಂಬುದು ನಾಳಿನ ವಾದ ಮಂಡನೆ ಬಳಿಕ ಪ್ರಕಟವಾಗಲಿದೆ.


Related Articles

Back to top button