ಪ್ರಗತಿವಾಹಿನಿ ಸುದ್ದಿ; ನವದೆಹಲಿ; ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮಾಜಿ ಸಚಿವ ವಿನಯ್ ಕುಲ್ಕರ್ಣಿ ಸಿಎಂ ಬಸವರಾಅಜ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸುವುದು ಖಚಿತವಾಗಿದೆ.
ನವದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ವಿನಯ್ ಕುಲ್ಕರ್ಣಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
ಮಾಜಿ ಸಚಿವ ವಿನಯ್ ಕುಲ್ಕರ್ಣಿ, ಈ ಬಾರಿ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಶಿಗ್ಗಾವಿಯಿಂದ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದರು. ಕಾಂಗ್ರೆಸ್ ಆಂತರಿಕ ಸಮೀಕ್ಷೆ ಪ್ರಕಾರ ವಿನಯ್ ಕುಲ್ಕರ್ಣಿ ಸಿಎಂ ಬೊಮ್ಮಾಯಿ ಅವರಿಗೆ ಪ್ರಬಲ ಸ್ಪರ್ಧಿ ಎಂಬ ಲೆಕ್ಕಾಚಾರ ಹಾಕಲಾಗಿದೆ. ಈ ನಿಟ್ಟಿನಲ್ಲಿ ಇಂದು ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿದ್ದು, ವಿನಯ್ ಕುಲ್ಕರ್ಣಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಆರೋಪದಲ್ಲಿ ವಿನಯ್ ಕುಲ್ಕರ್ಣಿ ಜೈಲು ಸೇರಿದ್ದರು ಸಧ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ