*ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಕೈ ಜೋಡಿಸಬೇಕು: ವಿನಯ ನಾವಲಗಟ್ಟಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಅಧಿಕಾರಿಗಳು, ಗ್ಯಾರಂಟಿ ಸಮಿತಿ ತಾಲೂಕಾ ಅಧ್ಯಕ್ಷರು ಕೈ ಜೋಡಿಸಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲಿ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಅರ್ಹ ಫಲಾನುಭವಿಗಳಗೆ ಯೋಜನೆಗಳು ಸಿಗುವಂತೆ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ವೀಡಿಯೊ ಕಾನ್ಸರೆನ್ಸ್ ಹಾಲ್ ನಲ್ಲಿ ಗುರುವಾರ (ಜು.31) ಜಿಲ್ಲಾ ಮಟ್ಟದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ವರು ಮಾತನಾಡಿದರು.
ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಬೇಕು. ಅದೇ ರೀತಿಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯರು ಗ್ರಾಮ ಪಂಚಾಯತಿಗಳಿಗೂ ಭೇಟಿ ನೀಡಿ ಯೋಜನೆಯಿಂದ ಹೊರಗುಳಿದವರಿಗೆ ಯೋಜನೆಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ಹೇಳಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಮಾತನಾಡಿ ಬಡಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿದ್ದು, ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ತಲುಪುವಂತೆ ಮಾಡಬೇಕು ಎಂದು ಹೇಳಿದರು
ಜಿಲ್ಲೆಯಲ್ಲಿ 1865 ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು. ಅರ್ಹ ಫಲಾನುಭವಿಗಳಿಗೆ ಪಡಿತರ ವಿತರಣೆ ಕಾರ್ಯ ಪ್ರಗತಿಯಲ್ಲಿದೆ.
ಆಗಸ್ಟ್ 2023 ರಿಂದ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಒಂದುವೇಳೆ ಅರ್ಹ ಯೂನಿಟ್ ಬಳಕೆ ಕ್ಕಿಂತ ಕಡಿಮೆ ಬಳಕೆ ಮಾಡಿದಲ್ಲಿ ಶೂನ್ಯ ಬಿಲ್ ನೀಡಲಾಗುತ್ತಿದೆ ಎಂದು ಹೆಸ್ಕಾಂ ಅಧಿಕಾರಿಗಳು ವಿವರಿಸಿದರು.
ವಿವಿಧ ಇಲಾಖೆಯ ಅಧಿಕಾರಿಗಳು, ಎಲ್ಲಾ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಸಿಬ್ಬಂದಿ ಬಿ. ಎಂ ಮುರುಘಾಮಠ (ವ್ಯವಸ್ಥಾಪಕರು ) ವಿಕ್ರಮ ಜಾಧವ, ಪ್ರಶಾಂತ ಕಲ್ಲಪ್ಪಗೌಡರ ಸಭೆಯಲ್ಲಿ ಹಾಜರಿದ್ದರು.