Kannada NewsLatest

ವಿನಯ ಕುಲಕರ್ಣಿ ಜನ್ಮದಿನಾಚರಣೆ ಅದ್ದೂರಿಗೆ ಕ್ಷಣಗಣನೆ; ಖರ್ಗೆ, ಸಿದ್ದರಾಮಯ್ಯ, ಡಿಕೆಶಿ, ದರ್ಶನ್ ಉಪಸ್ಥಿತಿ

ಪ್ರಗತಿವಾಹಿನಿ ಸುದ್ದಿ, ಕಿತ್ತೂರು: ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜನ್ಮ ದಿನವನ್ನು ಕಿತ್ತೂರಲ್ಲಿ ಅದ್ಧೂರಿಯಾಗಿ `ಜನ ನಮನ’ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.

ಇಂದೇ ಸಂಜೆ 4 ಗಂಟೆಗೆ ಕಿತ್ತೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದು  ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಚಿತ್ರನಟ ದರ್ಶನ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಲಿದ್ದಾರೆ ಎಂದು ಈಗಾಗಲೇ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ   ಮಾಹಿತಿ ನೀಡಿದ್ದಾರೆ. 

ಸತೀಶ್ ಜಾರಕಿಹೊಳಿ ಸೇರಿದಂತೆ ಎಲ್ಲ 6 ಜನ ಕೆಪಿಸಿಸಿ ಕಾರ್ಯಾಧ್ಯಕ್ಷರು, ರಾಜ್ಯದೆಲ್ಲೆಡೆಯಿಂದ ಮಾಜಿ ಸಚಿವರು, ಶಾಸಕರು, ಮುಖಂಡರು, ಹಲವಾರು ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ನ್ಯಾಯಾಲಯದ ಆದೇಶದಂತೆ ವಿನಯ ಕುಲಕರ್ಣಿ ಅವರು  ಧಾರವಾಡ ಜಿಲ್ಲೆ ಪ್ರವೇಶಿಸಲು ನಿಷೇಧವಿರುವ ಕಾರಣ ಕಾರ್ಯಕ್ರಮವನ್ನು ಕಿತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಬೃಹತ್ ವೇದಿಕೆ, ಜನರಿಗೆ ಕುಳಿತುಕೊಳ್ಳಲು ಸಮಾರು 50 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ, ಜಾನಪದ ಗೀತೆಗಳು, ಝೀ ವಾಹಿನಿಯ ಗಾಯಕರು, ನೃತ್ಯ ಕಲಾವಿದರು ಭಾಗವಹಿಸಲಿದ್ದಾರೆ .

Home add -Advt

ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯ ನಾನಾ ಭಾಗಗಳಿಂದ ಈಗಾಗಲೇ ಜನ ಕಿತ್ತೂರಿನತ್ತ ವಾಹನಗಳಲ್ಲಿ ಪ್ರಯಾಣ ಬೆಳೆಸಿದ್ದು ಬಂದವರಿಗೆ ಯಾವುದೇ ತೊಂದರೆಗಳಾಗದ ರೀತಿಯಲ್ಲಿ ಕುಡಿವ ನೀರು, ವಾಹನ ಪಾರ್ಕಿಂಗ್ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಸಹ ಬಿಗು ಬಂದೋಬಸ್ತು ಏರ್ಪಡಿಸಲಾಗಿದೆ.

ಸಿದ್ದರಾಮೋತ್ಸವ ಮಾದರಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಕೇವಲ ಹುಟ್ಟುಹಬ್ಬದ ಆಚರಣೆಯಷ್ಟೇ ಅಲ್ಲದೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ರಾಜಕೀಯ ಶಕ್ತಿ ಪ್ರದರ್ಶನವೂ ಆಗಿರಲಿದೆ ಎಂಬ ವಿಶ್ಲೇಷಣೆಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

ಶಿಕ್ಷಕರ ಅರ್ಹತಾ ಪರೀಕ್ಷೆ; 3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು

Related Articles

Back to top button