Belagavi NewsBelgaum NewsKannada NewsKarnataka NewsLatest

*ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ*: *ಆರೋಪಿಗೆ 20 ವರ್ಷ ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಳೆದ ವರ್ಷ ಫೆಬ್ರವರಿ 24ರಂದು ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ನಾಲ್ಕು ವರ್ಷದ ಬಾಲಕಿಗೆ ಚಾಕಲೇಟ್ ಕೊಟ್ಟು ಪುಸಲಾಯಿಸಿ  ತನ್ನ ಮನೆಗೆ ಕರೆದು ಆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ಆರೋಪಿ ನಿಸಾರ್ ಅಹ್ಮದ್ ಫಕ್ರು ಸಾಬ್ ಚಾಪ್ಗಾವಿ (68 ವರ್ಷ ಕಾಕರ ಗಲ್ಲಿ ನಂದಗಡ ) ಗೆ 20 ವರ್ಷ ಜೈಲು ಕಾರಾವಾಸ ಶಿಕ್ಷೆ ಮತ್ತು 10 ಸಾವಿರ ರೂಪಾಯಿಗಳ ದಂಡ ವಿಧಿಸಲಾಗಿದೆ.

ನಂದಗಡ ಪೊಲೀಸ್ ಠಾಣೆಯಲ್ಲಿ ದಿನಾಂಕ 27.02.24ರಂದು ದೂರು ನೀಡಲಾಗಿತ್ತು. ಈ ದೂರನ್ನು ನಂದಗಡ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಸ್ ಎಸ್ ಸಿ ಪಾಟೀಲ್ ದಾಖಲಿಸಿ ತನಿಖೆ ನಡೆಸಿದ್ದರು.

ದಿನಾಂಕ 17.04. 2024 ರಂದು ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದರು. ಆರೋಪಿತನನ್ನು ದಿನಾಂಕ 28.02.2024 ರಂದು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು. ತನಿಖಾ ಸಹಾಯಕರಾಗಿ  ಆರ್ ಎಸ್ ಕೆಮಾಲೆ ಕರ್ತವ್ಯ ನಿರ್ವಹಿಸಿದ್ದರು.

  ಇದೀಗ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾಧ ಸಿ ಎಮ್ ಪುಷ್ಪಲತಾ ಅವರು ಆರೋಪಿನಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿಗಳ ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಎಲ್ ವಿ ಪಾಟೀಲ್ ಸರ್ಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು. ಆರೋಪಿ ಈಗ ಹಿಂಡಲಗಾ ಜೈಲಿನಲ್ಲಿ ಇದ್ದಾನೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button