Latest

ಜಿಲ್ಲಾ ಉಸ್ತುವಾರಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾದ ಸಾಹುಕಾರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮದೇ ಜಿಲ್ಲೆಯಾದ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಎರಡು ಜಿಲ್ಲೆಗಳಾದ ಬೆಳಗಾವಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿಯನ್ನು ಸಿಎಂ ಬಿ ಎಸ್ ಯಡಿಯೂರಪ್ಪ ಬದಲಾವಣೆ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಬಳಿಯಿದ್ದ ಬೆಳಗಾವಿ ಜಿಲ್ಲಾ ಉಸ್ತುವಾರಿಯನ್ನು ಸಚಿವ ರಮೇಶ್ ಜಾರಕಿಹೊಳಿಗೆ ವಹಿಸಲಾಗಿದ್ದು, ಸಚಿವ ಮಾಧುಸ್ವಾಮಿ ಬಳಿಯಿದ್ದ ಹಾಸನ ಜಿಲ್ಲಾ ಉಸ್ತುವಾರಿಯನ್ನು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಅವರಿಗೆ ವಹಿಸಲಾಗಿದೆ.

Home add -Advt

ಈ ಹಿಂದೆ ಬೆಳಗಾವಿ ಉಸ್ತುವಾರಿ ಸ್ಥಾನದ ಮೇಲೆ ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಲಕ್ಷ್ಮಣ್ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಪೈಪೋಟಿ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಬೆಳಗಾವಿಯನ್ನು ಸಚಿವ ಜಗದೀಶ್ ಶೆಟ್ಟರ್ ಗೆ ವಹಿಸಿದ್ದರು. ಇದೀಗ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿ ಉಸ್ತುವಾರಿ ನೀಡಲಾಗಿದೆ.

ಉಸ್ತುವಾರಿ ಕೈ ತಪ್ಪಿದ್ದೇಕೆ? – ರಮೇಶ ಜಾರಕಿಹೊಳಿ ಜೊತೆ ಪ್ರಗತಿವಾಹಿನಿ ಸಂದರ್ಶನ

Related Articles

Back to top button