Kannada NewsKarnataka NewsLatest

ಶಿಷ್ಟಾಚಾರ ಉಲ್ಲಂಘನೆ: ಬಹಿಷ್ಕರಿಸಿದ ಚನ್ನರಾಜ ಹಟ್ಟಿಹೊಳಿ; ಕ್ಲಾಸ್ ತೆಗೆದುಕೊಂಡ ಈರಣ್ಣ ಕಡಾಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –   ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಕಡೆಗಣಿಸುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ 3ನೇ ರೈಲ್ವೆ ಗೇಟ್ ಫ್ಲೈ ಓವರ್ ಉದ್ಘಾಟನೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಹಿಷ್ಕರಿಸಿದರು.

ರೈಲ್ವೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರನ್ನೂ ಕಡೆಗಣಿಸುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾನು ಕಾರ್ಯಕ್ರಮಕ್ಕೆ ಹಾಜರಾಗದೆ ನನ್ನ ಪ್ರತಿಭಟನೆಯನ್ನು ದಾಖಲಿಸುತ್ತಿದ್ದೇನೆ. ಈ ಕುರಿತು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕೋರಲಾಗುವುದು ಎಂದು ಚನ್ನರಾಜ ಹಟ್ಟಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಅವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಿದ್ದ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ರೈಲ್ವೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲೇ ಆಕ್ರೋಶಗೊಂಡ ಕಡಾಡಿ, ಕಾರ್ಯಕ್ರಮ ಮುಗಿದ ನಂತರ ಅಧಿಕಾರಿಗಳನ್ನು ತಮ್ಮ ಕಚೆೇರಿಗೆ ಕರೆಸಿಕೊೊಂಡು ಕ್ಲಾಸ್ ತೆಗೆದುಕೊಂಡರು.

ಅತ್ಯಂತ ಅವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇಷ್ಟೊಂದು ದೊಡ್ಡ ಯೋಜನೆಯನ್ನು ಉದ್ಘಾಟಿಸುವಾಗ ಸರಿಯಾದ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕಿತ್ತು. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಗಡಿಬಿಡಿಯಲ್ಲಿ ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಹಾಗಾಗಿ ಅಧಿಕಾರಿಗಳನ್ನು ನನ್ನ ಕಚೇೇರಿಗೆ ಕರೆಸಿಕೊಂಡಿದ್ದೇನೆ. ಅವರಿಂದ ವಿವರ ಪಡೆಯುತ್ತೇನೆ ಎಂದು ಕಡಾಡಿ ಪ್ರಗತಿವಾಹಿನಿಗೆ ತಿಳಿಸಿದರು.

ರೈಲ್ವೆ ಮೇಲ್ಸೆತುವೆ ಉದ್ಘಾಟನೆಯಲ್ಲಿ ಪ್ರೋಟೋಕಾಲ್ ಉಲ್ಲಂಘನೆ?

Home add -Advt

https://pragati.taskdun.com/belgaum-news/violation-of-protocol-in-railway-flyover-inauguration/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button