Kannada NewsKarnataka NewsLatest

ಬೆಳಗಾವಿಯಲ್ಲಿ ಪ್ರತಿಭಟನೆ, ಹಿಂಸಾಚಾರ: 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಾಟ: ವಾಹನಗಳ ಗಾಜು ಪುಡಿ ಪುಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು, 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಲಾಗಿದೆ.

ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಅವಮಾನ ಮಾಡಲಾಗಿದೆ ಎನ್ನುವ ಸುದ್ದಿಯಿಂದ ಎಂಇಎಸ್, ಶಿವಸೇನೆಯ ಪುಂಡರು ದಿಢೀರ್ ಸಂಭಾಜಿ ವೃತ್ತದ ಬಳಿ ಜಮಾಯಿಸಿದರು. ಸುದ್ದಿ ತಿಳಿದ ತಕ್ಷಣ ಪೊಲೀಸರೂ ಆಗಮಿಸಿ ಪ್ರತಿಭಟನೆ ಆಯೋಜಿಸಿದವರನ್ನು ಸಮಾಧಾನಪಡಿಸಲು ಯತ್ನಿಸಿದರು.

Home add -Advt

ಆದರೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪೊಲೀಸ್ ವಾಹನ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ನಗರದಲ್ಲಿ ಕಲ್ಲು ತೂರಾಟ ನಡೆಸಲಾಯಿದೆ. ವಾಹನಗಳ ಗಾಜು ಪುಡಿ ಪುಡಿಯಾಗಿದೆ.

ಬೆಳಗಾವಿಯಲ್ಲಿ ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ : ಧರ್ಮವೀರ್ ಸಂಭಾಜಿ ವೃತ್ತದಲ್ಲಿ ಬೃಹತ್ ಜನಸ್ತೋಮ

Related Articles

Back to top button