ಪ್ರಗತಿವಾಹಿನಿ ಸುದ್ದಿ; ವಿರಾಜಪೇಟೆ: ಗ್ರಾಮ ಪಂಚಾಯಿತಿ ಸದಸ್ಯೆಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
28 ವರ್ಷದ ರಮ್ಯಾ ಹೆಚ್.ಎಸ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅರ್ವತೊಕ್ಲು ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ ರಮ್ಯಾ ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದ ರಮ್ಯಾರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ರಮ್ಯಾ ಮನೆಗೆ ವಾಪಸ್ ಆಗಿದ್ದರು. ಆದರೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಉಲ್ಬಣಗೊಂಡು ಮಹಿಳೆ ಸಾವನ್ನಪ್ಪಿದ್ದಾರೆ.
ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಗಾಂಧಿ ಕುಟುಂಬದಿಂದ ಪಕ್ಷದ ಆಸ್ತಿ ಕಬಳಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ