Latest

ಟೆಸ್ಟ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ವಿರಾಟ್ ಕೊಹ್ಲಿ

ಪ್ರಗತಿವಾಹಿನಿ ಸುದ್ದಿ; ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೆ ವಿದಾಯ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ವಿರಾಟ್ ಕೊಹ್ಲಿ, ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವಕ್ಕೆ ತಾವು ವಿದಾಯ ಹೇಳುತ್ತಿದ್ದು, ಸುದೀರ್ಘ ಅವಧಿವರೆಗೆ ಅವಕಾಶ ನೀಡಿದ್ದಕ್ಕಾಗಿ ಬಿಸಿಸಿಐಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ.

ನನ್ನ ನಿರ್ಧಾರದ ಬಗ್ಗೆ ನನಗೆ ಖಚಿತತೆ ಇದೆ. ಸಹಕಾರ, ಹೊಣೆಗಾರಿಕೆ ನೀಡಿದ್ದಕ್ಕೆ ಎಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.

ಈ ಮೊದಲು ಏಕದಿನ, ಟಿ-20ಗೆ ವಿದಾಯ ಹೇಳಿದ್ದ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸೋಲಿನ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Home add -Advt

ದೇಶದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡುತ್ತಿರುವ ಕರ್ನಾಟಕ: ಸಂಕ್ರಾಂತಿ ಸಂದೇಶದಲ್ಲಿ ಪ್ರಧಾನಿ ಬಣ್ಣನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button