Karnataka NewsLatestPolitics

*ಶಾಸಕ ವೀರೇಂದ್ರ ಪಪ್ಪಿಗೆ ಶಾಕ್ ಮೇಲೆ ಶಾಕ್: ಮತ್ತೆ ದಾಳಿ ನಡೆಸಿದ ED*

ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಬೆಟ್ಟಿ ಅಪ್ ಹಗರಣ ಸಂಅಬ್ಂಧ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿಯನ್ನು ಬಂಧಿಸಿರುವ ಇಡಿ ಅಧಿಕಾರಿಗಳು ಇಂದು ಮತ್ತೆ ಚಿತ್ರದುರ್ಗದಲ್ಲಿ ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ ಮತ್ತೊಂದೆಡೆ ಚಿತ್ರದುರ್ಗ ಜಿಲೆಯ ಚಳ್ಳಕೆರೆಯಲ್ಲಿ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ.

ಚಳ್ಳಕೆರೆ ಪಟ್ಟಣದ ವೀರಶೈವ ಸಹಕಾರಿ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್ ನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ವೇಳೆ ಸಿಕ್ಕ ಮಾಹಿತಿ ಆಧರಿಸಿ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button