
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಆನ್ ಲೈನ್ ಬೆಟ್ಟಿಂಗ್, ಆಫ್ ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಇಂದು ಇಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ವಿರೇಂದ್ರ ಪಪ್ಪಿ ಅವರಿಗೆ ಸೆಪ್ಟೆಂಬರ್ 22ರವರೆಗೆ ಆಂದರೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದೆ.