ವಿಷಾನಿಲ ಸೋರಿಕೆ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ವಿಶಾಖಪಟ್ಟಣಂನಲ್ಲಿ ಅನಿಲ ಸೋರೊಕೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರವನ್ನು ಸಿಎಂ ಜಗನ್ ಮೋಹನ್ ರೆಡ್ದಿ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗನ್ ರೆಡ್ದಿ, ಆಸ್ಪತ್ರೆಯಲ್ಲಿ 2-3 ದಿನ ಉಳಿದವರಿಗೆ 5 ಲಕ್ಷ ರೂ. ಗಾಯಾಳುಗಳಿಗೆ 1 ಲಕ್ಷ ರೂ ಪರಿಹಾರ ನೀಡಲಾಗುವುದು. ಅನಿಲ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೆ ಭರಿಸಲಿದೆ ಎಂದು ತಿಳಿಸಿದ್ದಾರೆ.

ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಎಂಬ ಗ್ರಾಮದ ಬಳಿ ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಕಾರಣ ಉಸಿರಾಟಕ್ಕೆ ತೊಂದೆರೆಯಾಗಿ 10 ಜನ ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button