Kannada NewsLatestNational

*ಕರಗಿದ ಕಬ್ಬಿಣ ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ: 8 ಕಾರ್ಮಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಭೀಕರ ದುರಂತ ಸಂಭವಿಸಿದೆ. ಕರಗಿದ ಕಬ್ಬಿಣವನ್ನು ಸಾಗಿಸುತ್ತಿದ್ದ ಲ್ಯಾಡಲ್ ಸ್ಫೋಟಗೊಂಡು ಎಂಟು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.

8 ಕಾರ್ಮಿಕರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಘಟನೆಯು ಕಂಟಿನ್ಯೂಯಸ್ ಕ್ಯಾಸ್ಟಿಂಗ್ ಯಂತ್ರದ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದಿದೆ. ಇಪ್ಪತ್ತೆರಡು ಲ್ಯಾಡಲ್‌ಗಳ ಕಾರ್ಯಾಚರಣೆ ಮುಗಿದ ನಂತರ, ಮುಂದಿನ ಲ್ಯಾಡಲ್ ಅನ್ನು ಸೇರಿಸುವಾಗ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ಫೋಟದ ತೀವ್ರತೆಗೆ ಬಿಸಿ ಲೋಹ ಚೆಲ್ಲಿದೆ ಮತ್ತು ಕ್ರೇನ್‌ಗೂ ಹಾನಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಲೋಹದ ಮಟ್ಟವನ್ನು ಮೇಲ್ವಿಚಾರಣೆ ಮಾಡುವ ಸ್ಲೈಡ್ ಗೇಟ್ ವ್ಯವಸ್ಥೆಯಲ್ಲಿನ ವೈಫಲ್ಯವು ಈ ಸ್ಫೋಟಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ ಘಟನ ಅಸ್ಥಳಕ್ಕೆ ಭೇಯ್ಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಘೋಷಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button