Latest

ಮತಾಂತರ ನಿಷೇಧ ಕಾಯಿದೆ ಹಿಂಪಡೆತ ಖಂಡಿಸಿ ವಿಶ್ವಹಿಂದೂ ಪರಿಷತ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ ಸರಕಾರ ಮತಾಂತರ ಕಾಯ್ದೆ ಹಿಂಪಡೆದಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾ ಆಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಭಾರತ ಹಿಂದೂ ರಾಷ್ಟ್ರವಾಗಿದ್ದು, ಇಲ್ಲಿ ಹಿಂದೂಗಳೊಂದಿಗೆ ಅನ್ಯ ಧರ್ಮೀಯರು ಸಹಬಾಳ್ವೆ ನಡೆಸಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಕರ್ನಾಟಕದಲ್ಲೂ ಹಿಂದೂಗಳೊಡನೆ ಅನ್ಯ ಧರ್ಮೀಯರು ತಮ್ಮ ಧರ್ಮದ ಮತಾಚರಣೆ ಮಾಡಲು ಅವಕಾಶ ಇದೆ‌. ಆದರೆ ಹಿಂದೂಗಳಿಗೆ ಆಮಿಷ ತೋರಿಸಿ ಅಥವಾ ಹೆದರಿಸಿ ಬಲವಂತವಾಗಿ ಮತಾಂತರಿಸುವುದನ್ನು ಅಥವಾ ಮರಳು ಮಾಡಿ ಮತಾಂತರಿಸುವುದು ಖಂಡನೀಯ ಎಂದು ಸರಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಭಾರತ ಹಿಂದೂ ರಾಷ್ಟ್ರವಾಗಿದೆ. ಕರ್ನಾಟಕ ಭಾರತದ ಒಂದು ಭಾಗ. ಹಿಂದೂಗಳನ್ನು ಮತಾಂತರದಿಂದ ರಕ್ಷಿಸಿ ಧರ್ಮ ಕಾಪಾಡುವುದು ಪ್ರತಿಯೊಬ್ಬ ಹಿಂದೂವಿನ ಕರ್ತವ್ಯ. ಕಾಂಗ್ರೆಸ್ ಸರಕಾರಕ್ಕೆ ಅನ್ಯ ಧರ್ಮೀಯರಲ್ಲದೆ ಬಹು ಸಂಖ್ಯೆಯಲ್ಲಿ ಹಿಂದೂಗಳೂ ಮತ ಹಾಕಿದ್ದಾರೆ. ಅವರ ಮತಗಳಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಹೊರತು ಕೇವಲ ಅಲ್ಪ ಸಂಖ್ಯಾತರ ಮತಗಳಿಂದಲ್ಲ. ಇದು ಕಾಂಗ್ರೆಸ್ ತನಗೆ ಮತ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ದ್ರೋಹ ಬಗೆದಿದೆ. ಕಾಂಗ್ರೆಸ್ ಸರಕಾರದ ಸಚಿವ ಸಂಪುಟದಲ್ಲಿ ಮತಾಂತರ ಕಾಯ್ದೆ ನಿಷೇಧ ಮಾಡುವ ನಿರ್ಧಾರವನ್ನು ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಹಿಂದಿನ ಸರಕಾರ ಶಾಲಾ ಪಠ್ಯದಲ್ಲಿ ವೀರ ಸಾವರ್ಕರ್ ಅವರಂಥ ರಾಷ್ಟ್ರಪುರುಷರ ಪರಿಚಯ ಸೇರಿಸಿದ್ದನ್ನು ಸಹ ಸಂಕುಚಿತ ಭಾವನೆ ಹಾಗೂ ಅಲ್ಪ ಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶ ಭಕ್ತರ ಪರಿಚಯ ಪಾಠಗಳನ್ನು ತೆಗೆದಿರುವುದು ಸಹ ಖಂಡನೀಯ ಎಂದು ಪ್ರತಿಭಟನಾಕಾರರು ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

Home add -Advt

ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ಉತ್ತರ ಪ್ರಾಂತ ಕರ್ನಾಟಕದ ಅಧ್ಯಕ್ಷ ಡಾ.ಎಸ್.ಆರ್.ರಾಮನಗೌಡರ, ಕೃಷ್ಣ ಭಟ್, ಮುರುಗೇಂದ್ರಗೌಡ ಪಾಟೀಲ, ಶರದ್ ಪಾಟೀಲ ಮತ್ತಿತರರು ಭಾಗವಹಿಸಿದ್ದರು.

Related Articles

Back to top button